ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತೃತ್ವದ ಸಮಿತಿಗೆ ಸುಪ್ರೀಂಕೋರ್ಟ್ ಒಪ್ಪಿಸಿದೆ. ಶ್ರೀಮಠ ಗೋಕರ್ಣ ವಿಚಾರದಲ್ಲಿ ದೇಗುಲ ಹಿತಕ್ಕಾಗಿ ಮತ್ತು ಸಮಾಜ ಹಿತಕ್ಕಾಗಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶ್ರೀಶಂಕರಾಚಾರ್ಯರ ಕಾಲದಿಂದಲೂ ಶ್ರೀರಾಮಚಂದ್ರಾಪುರಮಠ ಹಾಗೂ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪಾರಂಪರಿಕ ಸಂಬಂಧವಿದ್ದು, 2008 ರಲ್ಲಿ ಶ್ರೀಮಠಕ್ಕೆ ಪುನರ್ ಹಸ್ತಾಂತರವಾದ ನಂತರ “ದೇವಹಿತ – ಭಕ್ತಹಿತ – ಸೇವಕಹಿತ” ತತ್ವದಡಿ ದೇಗುಲ ಕೈಂಕರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶ್ರೀಮಠಕ್ಕೆ ಗೋಕರ್ಣ ದೇಗುಲ ಸೇವೆಯ ಸಾಧನವಾಗಿತ್ತೇ ವಿನಃ ಎಂದೂ ಇದನ್ನು ಆದಾಯದ ಮೂಲ ಎಂಬ ದೃಷ್ಟಿಯಿಂದ ಶ್ರೀಮಠ ನೋಡಿರಲಿಲ್ಲ ಎಂದು ಹೇಳಿದ್ದಾರೆ.
ನ್ಯಾಯಾಂಗದ ಬಗ್ಗೆ ಶ್ರೀಮಠಕ್ಕೆ ಸದಾ ಗೌರವ ಇದೆ. ಹಿಂದಿನಿಂದಲೂ ನ್ಯಾಯಾಲಯ ನೀಡಿದ ತೀರ್ಪನ್ನು ಶ್ರೀಮಠ ಗೌರವಿಸುತ್ತಲೇ ಬಂದಿದೆ. ಸುಪ್ರೀಂಕೋರ್ಟ್ ಇದೀಗ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ನಿರ್ವಹಣೆ ಹೊಣೆಯನ್ನು ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಇದು ಅಂತಿಮ ತೀರ್ಪಲ್ಲ, ಕಾದುನೋಡೋಣ ಎಂದು ಹೇಳಿದ್ದಾರೆ.
2008 ರಲ್ಲಿ ಮಹಾಬಲೇಶ್ವರ ದೇವಾಲಯ ಶ್ರೀಮಠಕ್ಕೆ ಪುನಃ ಹಸ್ತಾಂತರವಾದ ನಂತರ ಶ್ರೀಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಯ ಮಹಾಪರ್ವವೇ ನಡೆದಿದ್ದು, ನಾಲ್ಕು ವರ್ಷಗಳ ಹಿಂದೆ ದೇವಾಲಯದ ಸುವ್ಯವಸ್ಥಿತ ಆಡಳಿತ, ಸಮರ್ಥ ನಿರ್ವಹಣೆ ಹಾಗೂ ಪಾರದರ್ಶಕತೆಯನ್ನು ಪ್ರಮಾಣೀಕರಿಸುವ ಐಎಸ್‌ಓ ಪ್ರಮಾಣಪತ್ರ ಸಿಕ್ಕಿರುವುದು ಶ್ರೀಮಠದ ಮಾದರಿ ಆಡಳಿತಕ್ಕೆ ಸಾಕ್ಷಿಯಾಗಿದೆ.
ಹಸ್ತಾಂತರಕ್ಕೂ ಮೊದಲು ಹಾಗೂ ಹಸ್ತಾಂತರದ ನಂತರ ಅಜಗಜಾಂತರ ವ್ಯತ್ಯಾಸವನ್ನು ಗಮನಿಸಬಹುದಾಗಿದೆ . 2008 ಕ್ಕೂ ಮೊದಲು ಲೆಕ್ಕ ಪತ್ರಗಳೇ ಇಲ್ಲದ ಸ್ಥಿತಿ ಇತ್ತು ಹಾಗೂ ಮಠದ ಆಡಳಿತದಲ್ಲಿ ಪ್ರತಿ ರೂಪಾಯಿಗೂ ಆಡಿಟೆಡ್ ಲೆಕ್ಕ ಪತ್ರ ಇದೆ. ಹಿಂದೆ ಭಕ್ತರ ಸುಲಿಗೆ ನಡೆಯುತ್ತಿದ್ದ ಕ್ಷೇತ್ರದಲ್ಲಿ ಇದೀಗ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಎರಡು ಹೊತ್ತು ಪ್ರಸಾದ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ ಸೌಕರ್ಯಗಳ ಬಗ್ಗೆ ಸರ್ಕಾರ ನೇಮಕ ಮಾಡಿದ ಸಮಿತಿಯೇ ಮೆಚ್ಚುಗೆ ವ್ಯಕ್ತಪಡಿರುವುದು ಉಲ್ಲೇಖಾರ್ಹ ಎಂದು ವಿವರಿಸಿದ್ದಾರೆ. ದೇಗುಲದ ಹಿತಕ್ಕಾಗಿ, ಸಮಾಜದ ಹಿತಕ್ಕಾಗಿ ಶ್ರೀಮಠ, ಇಡೀ ಸಮಾಜದ ಜತೆಗೂಡಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…