Advertisement
ಪ್ರಮುಖ

ದಿಢೀರ್‌ ಏರಿಕೆಯಾದ ಚಿನ್ನದ ಬೆಲೆ | ಒಂದೇ ದಿನದಲ್ಲಿ 3280 ರೂಪಾಯಿ ಏರಿಕೆ..!

Share

ಚಿನ್ನದ ಬೆಲೆ ಏರಿಕೆ ನಿರಂತರವಾಗುತ್ತಿದೆ. ಆದರೆ ಮಂಗಳವಾರ ಮಾತ್ರಾ ದಿಢೀರ್‌ ಬೆಲೆ ಏರಿಕೆಯಾಗಿದ್ದು ಒಂದೇ ದಿನದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 3280 ರೂಪಾಯಿ ಏರಿಕೆ ಆಗಿದೆ.10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 3280 ರೂಪಾಯಿ ಹೆಚ್ಚಳ ಆಗಿದೆ. ಈವರೆಗಿನ ಎಲ್ಲಾ ದಾಖಲೆಗಳನ್ನು ಮುರಿದು ಇಂದು ಅತಿ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೂಡಾ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹12,868 ಆಗಿದೆ. ಬೆಳ್ಳಿ ಬೆಲೆಯಲ್ಲೂ ಭಾರಿ ಹೆಚ್ಚಳವಾಗಿದೆ. ಪ್ರತಿ ಗ್ರಾಂಗೆ ಬೆಳ್ಳಿ ಬೆಲೆಯು 8.60 ರೂಪಾಯಿ ಹೆಚ್ಚಳವಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲಿ 8,600 ರೂಪಾಯಿ ಏರಿಕೆಯಾಗಿದೆ.

ಸೆಪ್ಟಂಬರ್‌ ತಿಂಗಳಲ್ಲಿ ಚಿನ್ನದ ಬೆಲೆ ಕಡಿಮೆಯಾಗಿತ್ತು.  24 ಕ್ಯಾರೆಟ್ ಚಿನ್ನದ ಬೆಲೆ 320 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 300 ರೂಪಾಯಿ ಇಳಿಕೆಯಾಗಿತ್ತು. ಡಾಲರ್ ಮೌಲ್ಯ ಹೆಚ್ಚಳ ಮತ್ತು ಬೇಡಿಕೆ ಕುಸಿತದಿಂದ ಬೆಲೆ ಇಳಿಕೆಯಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಕಂಡುಬರುತ್ತಿರುವ ಅನಿಶ್ಚಿತತೆಗಳು ಮತ್ತು ಅಮೆರಿಕ ಹಾಗೂ ಚೀನಾ ನಡುವಿನ ಸುಂಕ ಸಮರದಂತಹ  ಸಮಸ್ಯೆಗಳಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದ ಕಡೆಗೆ ವಾಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿ ಅದರ ಬೆಲೆಯು ಕೂಡಾ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

26 minutes ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

5 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

5 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

16 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

16 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

20 hours ago