ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಬಳಿಕ ಚಿನ್ನದ ಬೆಲೆಯಲ್ಲಿ ಇಂದು ಇದ್ದಕ್ಕಿಂದ್ದಂತೆ 10 ಗ್ರಾಂಗೆ 1,000 ರೂ ಕುಸಿತವನ್ನು ಕಂಡಿದೆ.
ರಷ್ಯಾ- ಉಕ್ರೇನ್ ಸಂಘರ್ಷ ಬೇರೆ ದೇಶಗಳ ಮೇಲೂ ಪರಿಣಾಮ ಬೀರುತ್ತಿದ್ದು, ಭಾರತದಲ್ಲಿ ಚಿನ್ನದ ಬೆಲೆ ಗಗನಕ್ಕೇರುವ ಆತಂಕ ಎದುರಾಗಿತ್ತು. ಆದರೆ ಇಂದು ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 1೦ ಗ್ರಾಂ ಗೆ 1,000 ರೂ ಕುಸಿತವಾಗಿದೆ. ಅತ್ತ ಬೆಳ್ಳಿ ದರದಲ್ಲಿ ಕೂಡ ಕುಸಿತವಾಗುತ್ತಿದ್ದು.
ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,580 ರೂ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ ಇದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲೆ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel