ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಕೂಡ ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 280 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,590 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,160 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,050 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…