Advertisement
ಸುದ್ದಿಗಳು

ಅಡಿಕೆಗೆ ಸಹಾಯ ಧನ ವಿಸ್ತರಣೆಗೆ ಸಿಎಂ ಬೊಮ್ಮಾಯಿ ಕ್ರಮ ; ಅಡಿಕೆ ಬೆಳೆಗಾರರಲ್ಲಿ ಮೂಡಿದ ಭರವಸೆ

Share

ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ. ಹೊಳಲ್ಕೆರೆಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಹನಿ ನೀರಾವರಿ ಜೊತೆಗೆ ಸೇರಿಸಬೇಕೆಂದು ರೈತರ ಒತ್ತಾಯ ಇದೆ. ಇದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಡಿಕೆಗೆ ಶೇಕಡ 90 ರಷ್ಟು  ಸಹಾಯಧನ ನೀಡಲಾಗುತ್ತಿದೆ. ತೋಟಗಾರಿಕೆಯಲ್ಲಿ ಅಡಿಕೆ ಸೇರಿದೆ. ಸಾಮಾನ್ಯ ವರ್ಗದವರಿಗೆ ಶೇ.50 ರಿಂದ 75 ರಷ್ಟು ಹೆಚ್ಚಿಸಿದೆ. ವ್ಯಾಪ್ತಿ ವಿಸ್ತರಣೆಗೆ  ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ರೈತರ ಬದುಕು ಹಸನಾಗಲು ಗ್ರಾಮೀಣ ಆರ್ಥಿಕ ಸ್ಥಿತಿ ಬದಲಾಗಬೇಕು:ಸಿಎಂ

ರೈತರ ಬದುಕು ಉತ್ತಮವಾಗಲು ಗ್ರಾಮೀಣ ಆರ್ಥಿಕ ಸ್ಥಿತಿ ಬದಲಾಗಬೇಕು. ಕೃಷಿಯಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾಗಬೇಕು. ಇದರಲ್ಲಿ ಬ್ಯಾಂಕ್ ಗಳ ಪಾತ್ರ ಬಹಳ ದೊಡ್ಡದಿದೆ. ಈ ಬಗ್ಗೆ  ಎಲ್ಲಾ ಬ್ಯಾಂಕರ್ ಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ. ರೈತ ಕೇಂದ್ರಿತ ಕಾರ್ಯಕ್ರಮಗಳನ್ನು ರೂಪಿಸಿದಾಗ  ಹಾಗೂ  ರೈತರಿನಿಗೆ ಶಕ್ತಿ ತುಂಬುವ ಕಾಲ ಬಂದಿದೆ.

ಕಿಸಾನ್ ಸಮ್ಮಾನ್ , ರೈತ ವಿದ್ಯಾ ನಿಧಿ  ಕಾರ್ಯಕ್ರಮಗಳು ರೈತನನ್ನು ಶಕ್ತಿಶಾಲಿಯಾಗಿ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ  ಮೂಲಭೂತ ಬದಲಾವಣೆಗಳನ್ನು ತರಲಾಗಿದೆ. ಕೃಷಿ ಬೆಳೆಗೆ ತಕ್ಕಂತೆ  ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ  ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ. 

ರೈತ ವಿದ್ಯಾನಿಧಿ ರೂಪಿಸುವ ಮೂಲಕ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಿ ಬೇರೆ ವೃತ್ತಿ ಮಾಡುವ ಮೂಲಕ ಆದಾಯ ಹೆಚ್ಚಳ ಪಡೆಯುವಂತಾಗಬೇಕು. ಗ್ರಾಮೀಣ ಭಾಗದ ಮಕ್ಕಳು ಹೆಚ್ಚು ಬುದ್ದಿವಂತರಿರುತ್ತಾರೆ. ಅವರನ್ನು ಕಡೆಗಣಿಸಬಾರದು. 180 ಕೋಟಿ ರೂ.ಗಳ ವೆಚ್ಚದಲ್ಲಿ ರೈತರಿಗೆ ವಿಮಾ ಯೋಜನೆ ಜಾರಿಯಾಗಿದೆ.  ರೈತನ  ಸಹಜ  ಸಾವಾದರೂ ಅವನ ಕುಟುಂಬಕ್ಕೆ 2 ಲಕ್ಷ ರೂ ವಿಮಾ ಹಣ ಬರುವಂತೆ ‌ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

3 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

8 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

8 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

8 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

9 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago