ಅಡಿಕೆ ಹಾನಿಕಾರಕವಲ್ಲ | ಅಡಿಕೆ ಮಾನ ಉಳಿಸಿದ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ವರದಿ |

February 15, 2023
1:02 PM

ಅಡಿಕೆ ಹಾನಿಕಾರಕ ಎಂಬ ಮಾತು ಇಂದು ನಿನ್ನೆಯದಲ್ಲ. ಒಂದಲ್ಲ ಒಂದು ವದಂತಿಗಳು ಹುಟ್ಟುತ್ತಲೇ ಇರುತ್ತೆ. ಅಡಿಕೆ ಬೆಲೆ ಹೆಚ್ಚಾದರು ಅಡಿಕೆ ಬೆಳೆಗಾರರು ಸಂಕಷ್ಟವನ್ನು ಎದುರಿಸುತ್ತಲೇ ಇದ್ದಾರೆ. ಇದೀಗ ಅಡಿಕೆ ಬೆಳೆಗಾರರಿಗೆ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ವಿಜ್ಞಾನಿಗಳು ನೀಡಿರುವ ವರದಿ ತುಸು ನಿರಾಳತೆಯನ್ನು ನೀಡಿದೆ. ಅಡಿಕೆ ಹಾನಿಕರವಲ್ಲ, ಔಷಧೀಯ ಗುಣವಿರುವ ಸಾಂಪ್ರದಾಯಿಕ ಬೆಳೆ ಎಂದು ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ವಿಜ್ಞಾನಿಗಳು ಸಂಶೋಧನಾ ವರದಿ ನೀಡಿದ್ದಾರೆ.

Advertisement
Advertisement
Advertisement
Advertisement
ಈ ವರದಿಯನ್ನು ಶೀಘ್ರ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗುವುದು ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನ ಕೇಂದ್ರ ಸರ್ಕಾರ, ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದರಿಂದ ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ ಇತ್ತು. ಅದಕ್ಕಾಗಿ ಅಡಿಕೆ ಕಾರ್ಯಪಡೆಯಿಂದಲೇ ವೈಜ್ಞಾನಿಕ ಸಂಶೋಧನೆ ನಡೆಸಲು ರಾಮಯ್ಯ ಇನ್ಸ್ಟಿಟ್ಯೂಟ್ಗೆ ವಹಿಸಲಾಗಿತ್ತು. ಈಗ ವರದಿ ಬಂದಿದೆ. ಅಡಿಕೆ ಕ್ಷೇತ್ರ ವ್ಯಾಪ್ತಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 6.11 ಲಕ್ಷ ಹೆಕ್ಟೇರ್ ಬೆಳೆ ಕ್ಷೇತ್ರವಿದೆ.

Advertisement
ಅಡಿಕೆ ಭವಿಷ್ಯವೂ ಗುಟ್ಕಾ ಕಂಪನಿಗಳ ಮೇಲೆ ನಿಂತಿದೆ. ದರ ಕುಸಿದರೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಾರೆ. ಹಾಗಾಗಿ, ಏಕ ಬೆಳೆ ಪದ್ಧತಿ ಸರಿಯಲ್ಲ ಎಂದು ಮನವರಿಕೆ ಮಾಡಬೇಕಿದೆ. ಉದ್ಯೋಗ ಖಾತ್ರಿಯಲ್ಲಿ ಅಡಿಕೆ ಬೆಳೆಗೆ ಸಹಾಯಧನ, ಪ್ರೋತ್ಸಾಹ ಬೇಡ ಎಂದು ತೋಟಗಾರಿಕಾ ಸಚಿವರನ್ನು ಕೋರಲಾಗಿದೆ ಎಂಬ ವಿಷಯವನ್ನು ಗೃಹ ಸಚಿವರು ತಿಳಿಸಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ 42,504 ಹೆಕ್ಟೇರ್‌ ಪ್ರದೇಶದಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ಸರ್ಕಾರ ಕ್ರಮ ವಹಿಸುತ್ತಿದೆ. 17,267 ರೈತರಿಗೆ ಔಷಧ ಖರೀದಿಗೆ ಸಹಾಯ ಮಾಡಲಾಗಿದೆ. ಹೆಕ್ಟೇರ್ಗೆ 15,000 ಸಾವಿರ ಸಹಾಯಧನ ನೀಡಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ಎಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror