Advertisement
MIRROR FOCUS

#BPLCard | ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ| ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ – ಆಹಾರ ಇಲಾಖೆ

Share

ಕಳೆದ ಎರಡು ಮೂರು ತಿಂಗಳಿಂದ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಹೊಸದಾಗಿ ಸೇರ್ಪಡೆ ಆಗುವುದನ್ನು ತಡೆ ಹಿಡಿದಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರೇಷನ್‌ ಕಾರ್ಡ್‌ ದಾಖಲೆ ಕಡ್ಡಾಯಗೊಳಿಸಿದೆ. ಹಾಗಾಗಿ ಅನೇಕರು ಪರದಾಡುವಂತಾಗಿತ್ತು. ಇದೀಗ ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ.

Advertisement
Advertisement

ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

Advertisement

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

Advertisement

Source : Digital Media

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

13 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

14 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

22 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

22 hours ago