ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ, ಈ ಬಾರಿ ಚುನಾವಣೆ ಬಂದರೂ ಯಾವುದೇ ವಸ್ತುಗಳ ಬೆಲೆ ಇಳಿಕೆಗೆ ಸರ್ಕಾರಗಳು(Govt) ಮನಸ್ಸು ಮಾಡಲಿಲ್ಲ. ಎರಡು ಹಂತದ ಚುನಾವಣೆ ಮುಗಿದ ನಂತರ ಎಲ್‌ಪಿಜಿ ಗ್ಯಾಸ್ ಸಿಲಿಂಡರ್(LPG Gas Cylinder) ಹಾಗೂ ಚಿನ್ನದ ಬೆಲೆಯಲ್ಲಿ(Gold Price) ಇಳಿಕೆ ಕಂಡಿದೆ. ದೇಶದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆ(Silver Price) ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ 950 ರೂ. ಇಳಿಕೆಯಾಗಿದ್ದು, ಪ್ರಸ್ತುತ ರೂ.73,390 ಆಗಿದೆ. ಬೆಳ್ಳಿ ಬೆಲೆ ಕೆಜಿಗೆ 400 ರೂ. ಏರಿಕೆಯಾಗಿ 83,480 ರೂ.ಗೆ ತಲುಪಿದೆ.
ಬೆಂಗಳೂರಿನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 71,510 ರೂ., ಪ್ರತಿ ಕೆಜಿ ಬೆಳ್ಳಿ ಬೆಲೆ 83,400 ರೂ. ಇದೆ. ಹೈದರಾಬಾದ್‌ನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 73,390 ರೂ. ಪ್ರತಿ ಕೆಜಿ ಬೆಳ್ಳಿ ಬೆಲೆ 83,480 ರೂ. ಇದೆ.
ಸ್ಪಾಟ್ ಚಿನ್ನದ ಬೆಲೆ?: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸ್ಥಿರವಾಗಿವೆ. ಒಂದು ಔನ್ಸ್ ಸ್ಪಾಟ್ ಚಿನ್ನದ ಬೆಲೆ 2,330 ಡಾಲರ್. ಪ್ರಸ್ತುತ, ಒಂದು ಔನ್ಸ್ ಬೆಳ್ಳಿಯ ಬೆಲೆ 26.96 ಡಾಲರ್ ಆಗಿದೆ.
ಕ್ರಿಪ್ಟೋಕರೆನ್ಸಿ ದರಗಳು ಹೇಗಿವೆ?: ಕ್ರಿಪ್ಟೋ ಕರೆನ್ಸಿ ವಹಿವಾಟು ಭಾರಿ ಲಾಭದೊಂದಿಗೆ ಮುಂದುವರಿದಿದೆ.
ಬಿಟ್ ಕಾಯಿನ್- 55,30,000 ರೂ., ಎಥೆರಿಯಂ- 2,56,968 ರೂ.
ಪೆಟ್ರೋಲ್, ಡೀಸೆಲ್ ಬೆಲೆ..!: ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಹೈದರಾಬಾದ್‌ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.39 ರೂ. ಹಾಗೂ ಡೀಸೆಲ್ ಬೆಲೆ 95.63 ರೂ. ಇದೆ. ವಿಶಾಖಪಟ್ಟಣಂನಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.27 ರೂ. ಮತ್ತು ಡೀಸೆಲ್ ಬೆಲೆ 96.16 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ.94.76 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ರೂ.87.66 ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.84 ರೂ. ಮತ್ತು ಡೀಸೆಲ್ ಬೆಲೆ 96.16 ರೂ. ಇದೆ.
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಇಳಿಕೆ: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಸರಿಯಾಗಿ ಒಂದು ವಾರ ಇರುವಾಗಲೇ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ ಇಳಿಕೆ ಮಾಡಿವೆ. ಈ ನಿರ್ಧಾರದಿಂದ ಜನರಿಗೆ ಕೊಂಚ ನೆಮ್ಮದಿ ಲಭಿಸಿದೆ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 19 ರೂಪಾಯಿ ಇಳಿಕೆಯಾಗಿದೆ. ಮೇ 1 (ಇಂದಿನಿಂದ) ವಾಣಿಜ್ಯ ಸಿಲಿಂಡರ್ ಬೆಲೆಯನ್ನು 19 ರೂ. ಕಡಿತಗೊಳಿಸುತ್ತಿರುವುದಾಗಿ ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ. ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಎಷ್ಟಿದೆ?: ಮೇ 1 ರಿಂದ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ ಇಂಡೇನ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,764.50 ರೂ.ಗಳಷ್ಟಿತ್ತು. ಆದರೆ, ಇತ್ತೀಚಿನ 19 ರೂ. ಕಡಿತವು 1,745.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,879 ರೂ. ಆಗಿದ್ದರೆ, ಇತ್ತೀಚಿನ ಇಳಿಕೆಯೊಂದಿಗೆ 1859 ರೂ.ಗೆ ಇಳಿದಿದೆ. ಹೈದರಾಬಾದ್‌ನಲ್ಲಿ 19 ಕೆಜಿಯ ಇಂಡೇನ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2013.50 ರೂ. ಇದ್ದ ದರ, ಇದೀಗ 1994.50 ರೂ.ಗೆ ಇಳಿಕೆ ಕಂಡಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…