ರೈತರ ಮಕ್ಕಳಿಗೆ ಗುಡ್ ನ್ಯೂಸ್ : ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಯಲ್ಲಿ ಬರೋಬ್ಬರಿ 60 ಸೀಟು ಹೆಚ್ಚಳ

February 20, 2023
10:10 PM

ಭಾರತ ಕೃಷಿ ಪ್ರಧಾನ ದೇಶ. ಆದರೆ ಇತ್ತೀಚಿನ ದಿನಗಳಲ್ಲಿ ನವ ಯುವಕರು ಕೃಷಿ ಮರೆತು ಪಟ್ಟಣಗಳತ್ತ ಮುಖ ಮಾಡುತ್ತಿದ್ದಾರೆ ಎಂಬ ಅಪವಾದವಿದೆ. ಹಾಗೆ ಎಲ್ಲೋ ಒಂದು ಕಡೆ ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಮತ್ತೆ ಕೃಷಿಯತ್ತ ಹೊಸ ಹೊಸ ಯೋಜನೆಗಳೊಂದಿಗೆ ಮರಳುತ್ತಿರುವುದು ಸಂತೋಷಕರ ಸಂಗತಿ ಕೂಡ ಹೌದು. ಅದಕ್ಕೆ ಪೂರಕ ಎಂಬಂತೆ ಸರ್ಕಾರಗಳು ಅವರಿಗೆ ಬೇಕಾದ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ.

Advertisement
Advertisement

ಯುವಕರು ಕೃಷಿಯಲ್ಲಿ ತೊಡಗಿಸಿಕೊಂಡು ಹಳ್ಳಿಗಳನ್ನು ಸಮೃದ್ಧಗೊಳಿಸಬೇಕು ಎಂಬುದು ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಮಾತು.  ವಿದ್ಯಾರ್ಥಿಗಳು ಮತ್ತು ಯುವಕರು ಕೃಷಿಯನ್ನು ಹೆಚ್ಚು ಲಾಭದಾಯಕ ವಾಗಿಸಲು ಮತ್ತು ಹಳ್ಳಿಗಳನ್ನು ಸಮೃದ್ಧಗೊಳಿಸಲು ಕೊಡುಗೆ ನೀಡಬೇಕು  ಎಂದರು.  

Advertisement

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಭಾನುವಾರ ಚೌಧರಿ ಚರಣ್ ಸಿಂಗ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮಾರ್ಕೆಟಿಂಗ್, ಸೆಂಟರ್ ಫಾರ್ ಇನ್ನೋವೇಶನ್ ಇನ್ ಅಗ್ರಿಕಲ್ಚರ್ ಅಂಡ್ ಆಪರೇಷನ್ಸ್ ಜೈಪುರದಲ್ಲಿ ಕೃಷಿ ವ್ಯವಹಾರ ನಿರ್ವಹಣೆಯ ನಾಲ್ಕನೇ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಅತಿಥಿಗಳಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಉಪಸ್ಥಿತರಿದ್ದರು.

ಸಂದರ್ಭದಲ್ಲಿ ತೋಮರ್ ಅವರು ಮಾತನಾಡಿ, ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳ ಮೂಲಕ ನಿರಂತರವಾಗಿ ಶ್ರಮಿಸುತ್ತಿದೆ. ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಲಾಭ ತಂದು ಗ್ರಾಮಗಳು ಹೆಚ್ಚು ಅಭಿವೃದ್ಧಿ ಹೊಂದಲು ಕೃಷಿ ಸಂಬಂಧಿತ ವಿದ್ಯಾರ್ಥಿಗಳು ಯುವಕರು ಸಹ ಕೊಡುಗೆ ನೀಡಬೇಕು ಎಂದರು.  

Advertisement

ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಯಲ್ಲಿ ಇನ್ನೂ 60 ಸೀಟುಗಳನ್ನು ಸೇರಿಸುವುದಾಗಿ ಮತ್ತು ಕಡ್ಡಾಯ ಹಾಸ್ಟೆಲ್ ವಾಸ್ತವ್ಯದ ನಿಯಮವನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದರು.ಕೃಷಿ ಮುಖ್ಯವಾಗಿದ್ದು, ಎಲ್ಲರೂ ಇದರಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಯುವಜನತೆಯೂ ಇದರತ್ತ ಆಕರ್ಷಿತರಾಗಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಕೇಂದ್ರ ಸಚಿವ ತೋಮರ್ ಹೇಳಿದರು. ಕೃಷಿ ವಲಯದಲ್ಲಿ ಜೀವನೋಪಾಯವಿದೆ. ರೈತರ ದೇಶಭಕ್ತಿಯೂ ಇದೆ. ಏಕೆಂದರೆ ಕೃಷಿ ಉತ್ಪಾದನೆ ಇಲ್ಲದಿದ್ದರೆ ಎಲ್ಲವೂ ನಿಲ್ಲುತ್ತದೆ.

ಕೃಷಿ ಕ್ಷೇತ್ರದಲ್ಲಿ ಹಲವು ಸವಾಲುಗಳಿವೆ. ಕೇಂದ್ರ ಸರ್ಕಾರ ರಾಜ್ಯಗಳ ಸಹಯೋಗದಲ್ಲಿ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಪ್ರಗತಿ ಸಾಧಿಸುತ್ತಿದೆ. ಲಾಭದಾಯಕ ಬೆಳೆಗಳತ್ತ ಸಾಗುವುದು, ಬೆಳೆಗಳನ್ನು ವೈವಿಧ್ಯಗೊಳಿಸುವುದು, ಉತ್ಪನ್ನಗಳ ಮಾರಾಟದಲ್ಲಿ ಮಧ್ಯವರ್ತಿಗಳನ್ನು ತೊಡೆದುಹಾಕುವುದು ಮುಂತಾದ ಅನೇಕ ಸವಾಲುಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿಭಾಯಿಸಲಾಗುತ್ತಿದೆ ಎಂದು ವಿವರಿಸಿದರು.  

Advertisement

ಕೃಷಿ ಕ್ಷೇತ್ರದಲ್ಲಿ ವಿಜ್ಞಾನಿಗಳು ಸಾಕಷ್ಟು ಕೆಲಸ ಮಾಡಿದ್ದು, ರೈತರ ಅವಿರತ ಶ್ರಮ ಹಾಗೂ ಕೇಂದ್ರ ಸರ್ಕಾರದ ಸೂಕ್ತ ರೈತಸ್ನೇಹಿ ನೀತಿಗಳ ಜತೆಗೆ ಕೃಷಿಯಲ್ಲಿ ಅಭೂತಪೂರ್ವ ಪ್ರಗತಿಯಾಗಿದೆ ಎಂದು ತೋಮರ್ ಹೇಳಿದರು. ಹೆಚ್ಚಿನ ಕೃಷಿ ಉತ್ಪನ್ನಗಳ ವಿಷಯದಲ್ಲಿ ಭಾರತ ಇಂದು ವಿಶ್ವದಲ್ಲಿ ಮೊದಲ ಅಥವಾ ಎರಡನೇ ಸ್ಥಾನದಲ್ಲಿದೆ.

ನಾವೆಲ್ಲರೂ ಒಗ್ಗೂಡಿ ಇದನ್ನು ಮುನ್ನೆಲೆಗೆ ತರಬೇಕಿದೆ. ಭಾರತದಿಂದ ಆಹಾರ ಧಾನ್ಯಗಳ ಬಗ್ಗೆ ಜಗತ್ತು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದೆ. ನಾವು ಅದನ್ನು ಮಾಡುತ್ತಿದ್ದೇವೆ. ಮುಂದೆಯೂ ಹಾಗೆಯೇ ಮಾಡುತ್ತೇವೆ. ರೈತರ ಪರಿಶ್ರಮ ಹಾಗೂ ಕೇಂದ್ರ ಸರ್ಕಾರದ ಸತತ ಪ್ರಯತ್ನದಿಂದ ಕೃಷಿ ಸಂಶೋಧನೆಗಳು ಸಮರ್ಥವಾಗಿ ನಡೆಯುತ್ತಿವೆ. ಜೀವನೋಪಾಯಕ್ಕೆ ಉದ್ಯೋಗಗಳು ಅತ್ಯಗತ್ಯ. ಆದರೆ ಅದೇ ಸಮಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಯೂ ಅಗತ್ಯ. ಏಕೆಂದರೆ ದೇಶದ ಶೇ.56ರಷ್ಟು ಜನರು ಇದನ್ನು ಅವಲಂಬಿಸಿದ್ದಾರೆ ಎಂದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror