#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |

July 21, 2023
10:41 PM
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಬೆಲೆ ಏರಿಕೆಯಲ್ಲಿ ಈ ಬಾರಿ ಹೈನುಗಾರರಿಗೂ ಸ್ವಲ್ಪ ಪಾಲು ಸಿಗಲಿದೆ.

ಹಲವು ದಿನಗಳ ನಂತರ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಹೈನುಗಾರಿಕೆ ಸುಲಭದ ಕೆಲಸ ಅಲ್ಲ. ಆದರೂ ರೈತರು ಇದಕ್ಕೆಲ್ಲ ಜಗ್ಗದೇ ದನ ಸಾಕಿ ತಮ್ಮ ಜೀವನ ನಡೆಸುತ್ತಿದ್ದಾರೆ.ಸಮಾಜಕ್ಕೂ ತಮ್ಮ ಬೆವರ ಶ್ರಮವನ್ನು ಉಣಿಸುತ್ತಿದ್ದಾರೆ. ಆ ಬೆವರಿಗೆ ತಕ್ಕ ಪ್ರತಿಫಲ ದೊರೆತರೆ ಅವರಿಗೂ ಖುಷಿ. ಈ ಬಾರಿ ರಾಜ್ಯ ಸರ್ಕಾರ ರೈತರ ಹೈನುಗಾರರ ಪಾಲಿಗೂ ಕೊಂಚ ದಯೆ ತೋರಿದೆ.

Advertisement
Advertisement

ನಂದಿನಿ ಹಾಲಿನ #NandiniMilk ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ #KMF ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

Advertisement

KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?
May 15, 2024
2:29 PM
by: ಮುರಲೀಕೃಷ್ಣ ಕೆ ಜಿ
Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?
May 15, 2024
11:43 AM
by: ಸಾಯಿಶೇಖರ್ ಕರಿಕಳ
ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror