ಸರ್ಕಾರಿ ಜಮೀನು, ಗೋಮಾಳದಲ್ಲಿ ಯಾರೇ ಮನೆ ಕಟ್ಟಿದ್ದರೂ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡಹಳ್ಳಿಯಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡಿಸೆಂಬರ್ ನಲ್ಲಿ 10,000 ಬಡವರಿಗೆ ಸರ್ಕಾರದಿಂದ ಉಚಿತವಾಗಿ ನಿವೇಶನ ವಿತರಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿವೇಶನ ವಿತರಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 826 ಎಕರೆ ಪ್ರದೇಶದಲ್ಲಿ 22 ಸಾವಿರ ಮಂದಿಗೆ ಉಚಿತವಾಗಿ ನಿವೇಶನ ವಿತರಿಸಲು ಸಂಪುಟದಲ್ಲಿ ಅನುಮೋದನೆ ದೊರಕಿಸಿ ಕೊಡಲಾಗುವುದು ಎಂದು ಹೇಳಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನಿವೇಶನ ರಹಿತರಿಗೆ ಗುಡ್ ನ್ಯೂಸ್ | ಉಚಿತವಾಗಿ ನಿವೇಶನ ವಿತರಿಸಲು ಸಂಪುಟದಲ್ಲಿ ಅನುಮೋದನೆ"