ಸುದ್ದಿಗಳು

ಸ್ತೀ ಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವು | 2000 ಶಾಲಾ ಬಸ್ ಸೇವೆ : ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ

Share

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ  1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು  ನೀಡಲಾಗುತ್ತದೆ.

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ  1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು  ನೀಡಲಾಗುತ್ತದೆ.

ಎರಡನೇ ಹಂತದ ಯೋಜನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು.  ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನೂ ಸರ್ಕಾರ ಜಾರಿಗೊಳಿಸಿದೆ. ಮಹಿಳೆಯರು  ಹಾಗೂ ಯುವಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕನ್ನು ಬದುಕಬೇಕೆನ್ನುವುದು ಸರ್ಕಾರದ ಆಶಯ. ಕೃಷಿ ಕಾರ್ಮಿಕ ಮಹಿಳೆಯರಿಗೆ 1000 ರೂ. ಆರ್ಥಿಕ ಸಹಾಯ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.

2000 ಶಾಲಾ ಬಸ್ ಸೇವೆ :ಜನರ ಸಮಸ್ಯೆಗಳನ್ನು ನಿವಾರಿಸುವ ಸ್ಪಂದನಾಶೀಲ ಸರ್ಕಾರ ನಮ್ಮದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಿಮೋಥೆರಪಿ ಕೇಂದ್ರ ಹೆಚ್ಚಿಸಲಾಗಿದೆ. ಕಿವುಡರಿಗೆ ಶ್ರವಣ ಸಾಧನಕ್ಕೆ ಸಹಾಯಕ್ಕೆ 500 ಕೋಟಿ ರೂ. ನಿಗದಿಪಡಿಸಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲೆಗೆ ತೆರಳಲು 2000 ಶಾಲಾ ಬಸ್ ಸೇವೆಯನ್ನು ಪ್ರಾರಂಭಿಸಲಾಗುವುದು.

ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಐಟಿಐಯಲ್ಲಿ ಪಿಯುಸಿಯ ಅನುತೀರ್ಣರಾದ ಯುವಕರಿಗೆ ತರಬೇತಿ ಹಾಗೂ 6 ತಿಂಗಳವರೆಗೆ 1500 ರೂ. ಭತ್ಯೆ ನೀಡಿ ಉದ್ಯೋಗವನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ದುಡಿಯುವ ವರ್ಗಕ್ಕೆ ಬೆಂಬಲ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ನಾಡನ್ನು ಕಟ್ಟುವುದು ದುಡಿಯುವ ವರ್ಗ ಎಂದರು.

ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ :250 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್ ಗಳ ಸಾಮರ್ಥ್ಯವನ್ನು ಹೆಚ್ಚಿಸಿ, 30 ಸಾವಿರ ಓಬಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ  1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ನೇಕಾರರಿಗೆ ವಿದ್ಯುತ್ ಸಬ್ಸಿಡಿ,  2 ಲಕ್ಷದವರೆಗೆ ಸಾಲಸೌಲಭ್ಯ, ಸಹಾಯಧನ, 350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡಲಾಗುತ್ತಿದೆ.

ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ.  ಸಂವಿಧಾನದ 9 ನೇ ಶೆಡ್ಯೂಲ್ ಗೆ ಈ ಹೆಚ್ಚಳವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರದ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿ , ಇನ್ನಷ್ಟು ಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕೆನ್ನುವ ಉದ್ದೇಶದಿಂದ ಫಲಾನುಭವಿಗಳ ಸಮ್ಮೇಳನವನ್ನು ಏರ್ಪಡಿಸಲಾಗುತ್ತಿದೆ ಎಂದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

49 minutes ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

6 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

8 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

9 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

10 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

10 hours ago