ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ | ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ನಿರ್ಧಾರ | ಸಾರಿಗೆ ನೌಕರರ ವೇತನ ಹೆಚ್ಚಳದ ಭರವಸೆ |

February 22, 2023
1:34 PM

ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ  ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

Advertisement
Advertisement
Advertisement

ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್‌ಪಾಸ್‌ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಐದು ಬಸ್‌ಗಳನ್ನು ಓಡಿಸಲಾಗುವುದು.ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.

Advertisement

ಪ್ರತಿಭಟನೆಗೆ ಸಜ್ಜಾಗಿರುವ ಕಾರ್ಮಿಕ ಸಂಘಟನೆಗಳ ಜತೆ ಮಾತನಾಡುತ್ತೇನೆ.. : 
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ತೀವ್ರ ಪ್ರತಿಭಟನೆಗೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತನಾಡುತ್ತೇನೆಂದು ಹೇಳಿದರು.

ಸಾರಿಗೆ ಸಂಸ್ಥೆಗಳ ಜತೆ ಮಾತುಕತೆ ನಡೆಸಿ ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಆಧರಿಸಿ ವೇತನ ಹೆಚ್ಚಳ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror