ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್‌ಪಾಸ್ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಐದು ಬಸ್‌ಗಳನ್ನು ಓಡಿಸಲಾಗುವುದು.ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರತಿಭಟನೆಗೆ ಸಜ್ಜಾಗಿರುವ ಕಾರ್ಮಿಕ ಸಂಘಟನೆಗಳ ಜತೆ ಮಾತನಾಡುತ್ತೇನೆ.. :
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ತೀವ್ರ ಪ್ರತಿಭಟನೆಗೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತನಾಡುತ್ತೇನೆಂದು ಹೇಳಿದರು.
ಸಾರಿಗೆ ಸಂಸ್ಥೆಗಳ ಜತೆ ಮಾತುಕತೆ ನಡೆಸಿ ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಆಧರಿಸಿ ವೇತನ ಹೆಚ್ಚಳ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…
ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…
ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…
ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…