15.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ವಲ್ಪ ಜಾಸ್ತಿಯೇ ಇರಬಹುದು. ಕೊಡಗು, ಹಾಸನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 14 ಹಾಗೂ 15ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 16ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆಯಾದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
There is a forecast for good rainfall in most parts of the state on July 14 and 15. From July 16 onwards for the next 10 days, although the amount of rainfall is expected to decrease, there are indications that normal rainfall will continue in most parts of the state.