ಹವಾಮಾನ ವರದಿ | 14-07-2024 | ಎರಡು ದಿನ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ ನಿರೀಕ್ಷೆ | ಜು.16 ರಿಂದ ಮಳೆ ಪ್ರಮಾಣ ಕಡಿಮೆ |

July 14, 2024
11:38 AM
ಜುಲೈ 14 ಹಾಗೂ 15ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 16ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆಯಾದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

15.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ವಲ್ಪ ಜಾಸ್ತಿಯೇ ಇರಬಹುದು. ಕೊಡಗು, ಹಾಸನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 14 ಹಾಗೂ 15ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 16ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆಯಾದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

There is a forecast for good rainfall in most parts of the state on July 14 and 15. From July 16 onwards for the next 10 days, although the amount of rainfall is expected to decrease, there are indications that normal rainfall will continue in most parts of the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror