Advertisement
ವೆದರ್ ಮಿರರ್

ಹವಾಮಾನ ವರದಿ | 18-07-2025 | ಸಾಮಾನ್ಯ ಮಳೆ ಮುಂದುವರಿಕೆ | ಮುಂದಿನ 10 ದಿನಗಳಲ್ಲಿ ಎಲ್ಲೆಲ್ಲೆ ಮಳೆ..?

Share

19.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ ಜುಲೈ 20ರ ತನಕ ಮುಂದುವರಿಯಲಿದ್ದು, ನಂತರ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.

ಒಳನಾಡು : ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 26 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಎಂದಿನಂತೆ ಮುಂಗಾರು ಮಳೆಯಾಗುತ್ತಿದ್ದರೆ, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಮಳೆಯಾಗುತ್ತಿದೆ.  ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಾತ್ರ ಚುರಾಕಾಗಿರುವಂತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

6 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

15 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago