Advertisement
ಸುದ್ದಿಗಳು

ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?

Share

03.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 3 ರಿಂದ ಸ್ವಲ್ಪ ಕಡಿಮೆಯಾದರೂ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆಯಾಗುತ್ತಿದೆ. ದಿನದಲ್ಲಿ ಸಣ್ಣ ಪುಟ್ಟ ಅವಕಾಶಗಳು ಸಿಗಬಹುದು. ನಿರೀಕ್ಷಿತ ಅಥವಾ ಕಡಿಮೆ ಸಮಯದಲ್ಲಿ ಆಗುವ ಹವಾಮಾನ ಬದಲಾವಣೆ ಮುನ್ಸೂಚನೆಗೆ ಸಿಗುತ್ತಿಲ್ಲ. ( ಜೂನ್ ತಿಂಗಳ ಕೊನೆಯ 2 ದಿವಸಗಳಲ್ಲಿ ಮಳೆ ಕಡಿಮೆ ಅಂತಿದ್ದ ಮುನ್ಸೂಚನೆ ರಾತ್ರಿ ಬೆಳಗಾಗುವುದರಲ್ಲಿ ಬದಲಾವಣೆ ಆಗಿತ್ತು)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 3ರಿಂದ ಮಳೆಯ ಪ್ರಮಾಣವು ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಮೋಡ ಮಾತ್ರ ಇರಬಹುದು.
ಈಗಿನಂತೆ ಜುಲೈ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

23 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago