Advertisement
ವೆದರ್ ಮಿರರ್

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

Share

11.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 11ರಂದು ಸಹ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ನಾಳೆಯೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 12 ರಿಂದ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 11ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಂಗಾಳಕೂಲ್ಲಿಯ ಮೇಲ್ಮೈ ಸುಳಿಗಾಳಿಯು ಜೂನ್ 11ರ ರಾತ್ರಿ ಅಥವಾ 12ರಂದು ಆಂದ್ರಾ ಕರಾವಳಿಗೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

12 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

12 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

13 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

13 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

13 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago