23.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳ ತಾಲೂಕುಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾರಿ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಕಲಬುರ್ಗಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
According to the latest meteorological reports, good rainfall is forecasted in most parts of the state in the coming 3 days. It is important for everyone to stay updated on weather forecasts and take necessary precautions to ensure safety during the rainy season.