ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!

July 23, 2025
3:57 PM
ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ ಹೆಚ್ಚಾಗುವ ಆತಂಕವಿದೆ.

24.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 29 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಿಡುವಿನ ಅವಧಿ ಕಡಿಮೆ ಇದ್ದು, ನಿರಂತರ ಹನಿ ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದೀರ್ಘ ಅವಧಿಯ ಹನಿ ಮಳೆ ಜುಲೈ 28 ರ ತನಕ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳ ತಾಲೂಕುಗಳಲ್ಲಿ ಮೋಡ ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ ಹೆಚ್ಚಾಗುವ ಆತಂಕವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror