Advertisement
ವೆದರ್ ಮಿರರ್

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

Share

22.05.225ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಮಳೆ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ. ಈಗಿನಂತೆ ಮೇ 22 ರ ತನಕ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 23 ರಿಂದ ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ23 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಹಾಗೂ ಬಳ್ಳಾರಿಯ ಆಂದ್ರಾ ಗಡಿಭಾಗಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಆಂದ್ರಾ ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮೇ 24ರಿಂದ ಮುಂಗಾರು ಮಳೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಆರಂಭವಾಗುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ಈ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಸ್ವಲ್ಪ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

14 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

18 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

22 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago