ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

June 11, 2025
2:14 PM
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.  ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ ಭಾಗಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಿಗೆ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ

12.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಾದರೂ ಜೂನ್ 15 ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾದರೂ ಜೂನ್ 15 ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.  ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ ಭಾಗಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಿಗೆ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಜೂನ್ 13 ರ ನಂತರ ಈ ವಿದ್ಯಮಾನವು ಬದಲಾಗಿ ಪಶ್ಚಿಮದಿಂದ ಪೂರ್ವಕ್ಕೆ ಅಥವಾ ನೈರುತ್ಯದಿಂದ ಈಶಾನ್ಯಕ್ಕೆ ಮೋಡ ಚಲಿಸುವ ನಿರೀಕ್ಷೆ ಇದೆ. ಆಗ ಮಾತ್ರ ರಾಜ್ಯದಾದ್ಯಂತ ಉತ್ತಮ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror