Advertisement
MIRROR FOCUS

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

Share

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ ನೀಡಿದೆ. ಈಗ ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಸೇರಿದಂತೆ ದೆಹಲಿಗೂ ಮುಂಗಾರು ಮಳೆ ವಿಸ್ತರಣೆಯಾಗುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಪ್ರವಾಹವನ್ನು ಎದುರಿಸುತ್ತಿದೆ, ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಜೂನ್ 22, 23, 25 ಮತ್ತು 26 ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗಳು ಕುಸಿದು ಸಂಚಾರ ದುಸ್ತರವಾಗಿದೆ. ಬೆಟ್ಟಗಳಲ್ಲಿ ಭಾರೀ ಮಳೆಯಿಂದಾಗಿ  ಭೂಕುಸಿತ ಮತ್ತು ಮಣ್ಣು ಕುಸಿತ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಮುಂದಿನ ಎರಡು ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗಲಿದೆ.

ಇದೇ ವೇಳೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಬೈ, ಥಾಣೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಮುಂಬೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ರಾಯಗಢ ಜಿಲ್ಲೆ (134.1 ಮಿ.ಮೀ), ಪಾಲ್ಘರ್ (120.9 ಮಿ.ಮೀ), ಥಾಣೆ (90.3 ಮಿ.ಮೀ) ಮತ್ತು ಮುಂಬೈ ಉಪನಗರ ಪ್ರದೇಶಗಳಲ್ಲಿ (60.5 ಮಿ.ಮೀ) ಮಳೆಯಾಗಿದೆ. ಜೂನ್ 21 ಮತ್ತು ಜೂನ್ 22 ರಂದು ಭಾರೀ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆ, ಗುಡುಗು ಸಹಿತ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಐಎಂಡಿ ಪ್ರಕಾರ, ಶುಕ್ರವಾರ ದೆಹಲಿಯ ಗರಿಷ್ಠ ತಾಪಮಾನವು 36 ಡಿಗ್ರಿಗಿಂತ ಕಡಿಮೆ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

10 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

22 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago