ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

June 7, 2025
1:48 PM
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 8ರಂದು ಅಲ್ಲಲ್ಲಿ ತುಂತುರು ಹಾಗೂ 9 ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಹಾಸನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 10ರ ತನಕ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, 11 ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜೂನ್ 8 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror