ಹವಾಮಾನ ವರದಿ | 16-07-2024 | ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆ | ರಾಜ್ಯದೆಲ್ಲೆಡೆ ಸಾಧಾರಣ ಮಳೆ | ಮಲೆನಾಡಲ್ಲಿ ಜು.25 ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ |

July 16, 2024
11:30 AM
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.

17.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಪಾವಗಡ, ಚಿತ್ರದುರ್ಗ, ಬಳ್ಳಾರಿ ದಕ್ಷಿಣ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ವಿಜಯಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈಗಿನಂತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಆದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

There is a prediction of good rainfall in the coastal districts of Karnataka, including Kasaragod. The forecast also indicates good rainfall in most areas of Kodagu, Chikkamagaluru, and Shimoga districts. Additionally, good rains are expected around Sakleshpur in Hassan, while normal rainfall is expected in other parts of the region.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |
May 3, 2025
2:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |
May 3, 2025
2:11 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group