Advertisement
MIRROR FOCUS

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

Share

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ ಕವಿಕಲ್ ಗಂಡಿ ಬಳಿ ರಸ್ತೆ ಮಣ್ಣು ಕಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ.  ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು  ಪ್ರವಾಸಿಗರು ಸಾರ್ವಜನಿಕರು ಗುಡ್ಡಗಾಡು ಪ್ರದೇಶಕ್ಕೆ ತೆರಳುವುದು, ನೀರಿಗೆ ಇಳಿಯುವುದು ಮಾಡಬಾರದು. ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ  ನೈಋತ್ಯ ಮುಂಗಾರು ತೀವ್ರವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ  ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷಿಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

15 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago