23.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ತಡ ರಾತ್ರಿ ಕರಾವಳಿ ತೀರ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, ನಾಳೆ ಕರಾವಳಿ ಜಿಲ್ಲೆಗಳ ಇತರ ಭಾಗಗಳಿಗೂ ವ್ಯಾಪಿಸುವ ಮುನ್ಸೂಚನೆ ಇದೆ. ಈಗಿನಂತೆ ಮೇ ಕೊನೆಯ ತನಕವೂ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮೇ 23ರಿಂದ ಮುಂಗಾರು ಉತ್ತಮವಾಗಿ ಆರಂಭವಾಗಲಿದೆ.
ಒಳನಾಡು : ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮೇ 23ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೇ 24ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಮೇ 26 ಅಥವಾ 27ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…