ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ. ಮೇ.11 ರ ಬಳಿಕ ಅಂದರೆ ಇಂದಿನಿಂದ ಆಂಡ್ರಾಯ್ಡ್ ಫೋನ್ ಬಳಕೆದಾರರು ಆಪ್ ಬಳಸಿ ಕರೆ ರೆಕಾರ್ಡ್ (Call recording) ಮಾಡುವುದು ಸಾಧ್ಯವಾಗುವುದಿಲ್ಲ.
ಆಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೋಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್ ರೆಕಾರ್ಡಿಂಗ್ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ. ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್ (Google) ಪ್ಲಾನ್ ಮಾಡಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಅಂದರೆ, ಗೂಗಲ್ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್ ಪಾರ್ಟಿ ಕಾಲ್ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಲಿದೆಯಾ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…