ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ .ಕಳೆದ ಎರಡು ವರ್ಷದಲ್ಲಿ 189241ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರವಾಗಿ ರೈತರು ಮತ್ತು ಖಾಸಗಿ ವ್ಯಕ್ತಿಗಳು ಬೆಳೆದ ಮರಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು. ಮರದ ದಿಮ್ಮಿಗಳನ್ನು ನೇರವಾಗಿ ಇತರೆ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಒಟ್ಟು 3471 ಪರವಾನಗಿ ಹೊಂದಿರುವ ಮಿಲ್ಲುಗಳಿದ್ದು ,ಕಳೆದ 2 ವರ್ಷಗಳಲ್ಲಿ ಅರಣ್ಯ ಇಲಾಖೆಯಿಂದ ಇ-ಹರಾಜಿನಲ್ಲಿ ಒಟ್ಟು 4,51,685 ಘನ ಮೀಟರ್ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಖರೀದಿ-ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.