ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ದೆಹಲಿಯಲ್ಲಿ ಹೇಳಿದ್ದಾರೆ.
ಎಕಾನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆಯಲ್ಲಿ ಪಾಲ್ಗೊಂಡ ಸಚಿವರು, ಅಮೆರಿಕ ಜೊತೆಗಿನ ಮಾತುಕತೆಗಳಲ್ಲಿ ಭಾರತ ತನ್ನ ನಿಲುವಿನ ಬಗ್ಗೆ ಸ್ಪಷ್ಟವಾಗಿದೆ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವ ನಿರ್ಧಾರ ಕೈಗೊಂಡಿದೆ ಎಂದರು. ತೈಲ ಆಮದು ಮತ್ತು ನಿರ್ಬಂಧಗಳ ಕುರಿತು ಪ್ರಸ್ತಾಪಿಸಿದ ಸಚಿವ ಎಸ್.ಜೈಶಂಕರ್, ಭಾರತ, ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ದೇಶವಲ್ಲ, ಬದಲಿಗೆ ಚೈನಾ ರಷ್ಯಾದ ಅತಿ ದೊಡ್ಡ ತೈಲ ಖರೀದಿದಾರ ದೇಶ. ಭಾರತ ಅಮೆರಿಕದಿಂದ ತೈಲ ಆಮದುಗಳನ್ನು ಹೆಚ್ಚಿಸಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜಾಗತಿಕ ಮಾರುಕಟ್ಟೆ ಸ್ಥಿರತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದೆ ಎಂದರು. ಕೇಂದ್ರ ಸರ್ಕಾರ ಸ್ವಾವಲಂಬನೆ, ಆತ್ಮನಿರ್ಭರತೆಗೆ ವಿಶೇಷ ಒತ್ತು ನೀಡುತ್ತಿದೆ. ಇತ್ತೀಚಿನ ಕೆಲವು ಅನುಭವವು ಒಂದೇ ಪೂರೈಕೆ ಸರಪಳಿ ಅಥವಾ ಒಂದೇ ದೇಶದ ಮೂಲದ ಮೇಲೆ ಅತಿಯಾಗಿ ಅವಲಂಬಿತರಾಗಬಾರದು ಎಂಬ ಪಾಠ ಕಲಿಸಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…