300 ಮೆಗಾವ್ಯಾಟ್ ಸೌರ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಪಾವಗಢದ ಸೋಲಾರ್ ಪಾರ್ಕ್‌ನಲ್ಲಿ 300 ಮೆಗಾವ್ಯಾಟ್ ಸೌರಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜಿಎಸ್ಡಬ್ಲ್ಯು ಎನರ್ಜಿಯ ಅಂಗಸಂಸ್ಥೆಯೊಂದಿಗೆ ಖರೀದಿ ಒಪ್ಪಂದಕ್ಕೆ ಮುದ್ರೆ ಹಾಕಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿದ್ದು, ಇದರಿಂದ ದೊಡ್ಡ ಪ್ರಮಾಣದಲ್ಲಿ ಹೂಡಿಕೆಯಾಗುತ್ತಿದೆ ಎಂದು ಅವರು ಹೇಳಿದರು. ನವೀಕರಿಸಬಹುದಾದ ಇಂಧನ ನೀತಿಯನ್ನು 2009 ರಲ್ಲೇ ಜಾರಿಗೊಳಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಭಾಜನವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel