ದೇಶದ ಬೆಳವಣಿಗೆ ಆಗಬೇಕಾದ್ದು ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಮೂಲಕ. ಶಾಲೆಗಳಿಗೆ, ಅದರಲ್ಲೂ ಗ್ರಾಮೀಣ ಶಾಲೆಗಳಿಗೆ ಶಿಕ್ಷಣಕ್ಕೆ ಆದ್ಯತೆ ಇರಬೇಕು. ಇನ್ನೊಂದು ಪ್ರಮುಖವಾದ್ದು ಆರೋಗ್ಯ ವ್ಯವಸ್ಥೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಆರೋಗ್ಯ ವ್ಯವಸ್ಥೆಗಳು ಸುಧಾರಣೆಗೆ ಇವೆ. ಇಂತಹದ್ದರಲ್ಲಿ ಸರ್ಕಾರಗಳು ನೀಡುವ ಉಚಿತ ಇರುವ ಶಿಕ್ಷಣ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತಿದೆ. ಇದೀಗ ಗ್ಯಾರಂಟಿ #Guarantee ಹೊಡೆತದ ಕಾರಣ ಸರ್ಕಾರ #KarnatakaGovt ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಬೇಕಾಗಿ ಬಂದಿದೆ. ಈಗ ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಘೋಷಣೆಯಾದಾಗ ಹುಬ್ಬೇರಿಸಿದವರೆಷ್ಟೋ.. ಗ್ಯಾರಂಟಿ ನೀಡಿದ ಸರ್ಕಾರದ ಬಣ್ಣ ದಿನ ಕಳೆದಂತೆ ಕಳಚಿಕೊಳ್ಳುತ್ತಿದೆ. ಇದೀಗ ಗ್ಯಾರಂಟಿ ಹೊಡೆತದ ಕಾರಣ ಕಾಂಗ್ರೆಸ್ ಸರ್ಕಾರ ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್ ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.
ಬಿಜೆಪಿ ಅವಧಿಯಲ್ಲಿ ಶೂಗೆ ನಿಗದಿ ಮಾಡಿದ್ದ ದರವನ್ನೇ ಈ ವರ್ಷವೂ ಸರ್ಕಾರ ಫಿಕ್ಸ್ ಮಾಡಿದೆ. ಕಳೆದ ವರ್ಷದ ರೇಟ್‌ನಲ್ಲಿಯೇ ಶೂ, ಸಾಕ್ಸ್ ಖರೀದಿ ಮಾಡುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 2019-20ನೇ ಸಾಲಿನಲ್ಲಿ ಇದ್ದ ದರದಲ್ಲೇ 2023-24ನೇ ಸಾಲಿಗೂ ಶೂ ಖರೀದಿಗೆ ಸರ್ಕಾರದ ಆದೇಶಿಸಿದೆ.
ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಸಂಘ ಸಂಸ್ಥೆಗಳು, ದಾನಿಗಳ ಮೊರೆ ಹೋಗಬೇಕಾಗಿದೆ. ಸರ್ಕಾರದ ಆದೇಶದಿಂದ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಕಂಗಾಲಾಗಿದ್ದಾರೆ.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…