ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ. ………ಮುಂದೆ ಓದಿ……..
ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು, ಇಲ್ಲವೇ 1 ಗಂಟೆ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ. ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿದ್ದಾಗಿ ಸಚಿವರು ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ವೈದ್ಯರು, ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ. ವೈದ್ಯರು ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್‌ಗೆ ತಮ ಹಸ್ತಮುದ್ರೆ ಹಾಕಬೇಕು ಎಂದು ನಿರ್ದೇಶನ ನೀಡಿದ್ದಾರೆ.