ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಿ ನೌಕರರ ಆಗ್ರಹ: ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

February 25, 2023
6:00 PM

ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್​ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲು ಸಜ್ಜಾಗಿದ್ದಾರೆ ಎಂದರು.

ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ.  ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror