ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದ್ದಾರೆ. ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲು ಸಜ್ಜಾಗಿದ್ದಾರೆ ಎಂದರು.
ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು. ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…