ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಹಾಗೂ ತಮಿಳುನಾಡಿಗೆ ಒಮ್ಮತ ಒದಗಿ ಬರುತ್ತಲೇ ಇಲ್ಲ. ಅದರಲ್ಲೂ ರಾಜ್ಯ ಸರ್ಕಾರ, ತಮಿಳುನಾಡಿನ ಎದುರು ಹಿನ್ನಡೆಯನ್ನೇ ಅನುಭವಿಸ್ತಿದೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಇಲ್ಲದಿದ್ರೂ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಲು ತಾಕೀತು ಮಾಡಿದೆ. ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ಪ್ರಾಧಿಕಾರ ಸೂಚನೆ ನೀಡಿತ್ತು. ಪ್ರಾಧಿಕಾರದ ಸೂಚನೆ ಹಿನ್ನೆಲೆ ರಾಜ್ಯದ ಜನತೆಯ ವಿರೋಧದ ನಡುವೆಯೂ ಅಧಿಕಾರಿಗಳು ಕಾವೇರಿ ನದಿಗೆ ನೀರು ಹರಿಬಿಟ್ಟಿದ್ದಾರೆ.
ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ ರೈತ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. CWMA ಆದೇಶವನ್ನ ಯಾವುದೇ ಕಾರಣಕ್ಕೂ ಪಾಲಿಸಲು ಸಾಧ್ಯವಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಆದರೆ ಸರ್ಕಾರ ಆದೇಶದಂತೆ ನೀರು ಹರಿಸುತ್ತಿದೆ. CWMA ಆದೇಶ ಕುರಿತಂತೆ ಮಂಡ್ಯ ಸಂಸದೆ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿದ್ದು, ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದೀಗ ಮತ್ತೆ 15 ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ ಅಂತ ವಿವರಿಸಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿರೋ ಕೇಂದ್ರ ಜಲಶಕ್ತಿ ಸಚಿವ, ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸಲಾಗುವುದು ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾವೇರಿ ಪ್ರಾಧಿಕಾರ ಆದೇಶ ಹಿನ್ನೆಲೆ, ಮಂಡ್ಯದಲ್ಲಿ ಮತ್ತೆ ರೈತರ ಕಿಚ್ಚು ಭುಗಿಲೆದ್ದಿದೆ. ಪ್ರಾಧಿಕಾರದ ಆದೇಶ ಖಂಡಿಸಿ ರೈತರು ನೀರಿಗಿಳಿದು, ಘೋಷಣೆ ಕೂಗಿ ಕಪ್ಪು ಭಾವುಟ ಪ್ರದರ್ಶನ ಮಾಡಿದ್ದಾರೆ.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…
ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…
ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…
ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…
ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…