MIRROR FOCUS

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಲವು ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ ಬಳಕೆ ಮಾಡಲು ಸರ್ಕಾರವು 1 ವರ್ಷದ ಅವಧಿಗೆ ಅನುಮೋದನೆಯನ್ನು ವಿಸ್ತರಣೆ ಮಾಡಿದೆ. ಕೆಲವು ಕೃಷಿಯಲ್ಲಿ ಡ್ರೋನ್ ಬಳಕೆಯುವ ಹಲವು ಪ್ರಯೋಜನಗಳನ್ನು ನೀಡುತ್ತಿದೆ.  ಹೀಗಾಗಿ ನಿಗದಿತ ಕೀಟನಾಶಕಗಳನ್ನು ಮಾತ್ರಾ ಸಿಂಪಡಿಸಲು ಡ್ರೋನ್‌ಗಳನ್ನು ಬಳಸಲು ಸಸ್ಯ ಸಂರಕ್ಷಣಾ ಕಂಪನಿಗಳಿಗೆ ನೀಡಲಾದ ಮಧ್ಯಂತರ ಅನುಮೋದನೆಯನ್ನು ಸರ್ಕಾರ ವಿಸ್ತರಿಸಿದೆ.

Advertisement

ಏಪ್ರಿಲ್  2024 ರಿಂದ ಪ್ರಾರಂಭವಾಗುವಂತೆ ಈ ಅನುಮೋದನೆಯನ್ನು  ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಎಲ್A ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿ ಅನುಮತಿ ನೀಡಲಾಗಿತ್ತು. ಅದೇ ನಿಯಮಗಳನ್ನು ಮುಂದುವರಿಸಲಾಗಿದೆ. ಕೆಲವು ಸಮಯದ ಹಿಂದೆ ಬೆಳೆಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಡ್ರೋನ್‌ಗಳ ಬಳಕೆಯ ಮಾರ್ಗಸೂಚಿಯನ್ನು ತಿಳಿಸಲಾಗಿತ್ತು. ನಿಬಂಧನೆಗಳು, ಹಾರುವ ಅನುಮತಿಗಳು, ಪ್ರದೇಶದ ದೂರ ನಿರ್ಬಂಧಗಳು, ತೂಕದ ವರ್ಗೀಕರಣ, ಜನದಟ್ಟಣೆ ಪ್ರದೇಶಗಳ ನಿರ್ಬಂಧ, ಡ್ರೋನ್ ನೋಂದಣಿ, ಸುರಕ್ಷತಾ ವಿಮೆ, ಪೈಲಟಿಂಗ್ ಪ್ರಮಾಣೀಕರಣ, ಕಾರ್ಯಾಚರಣೆ ಯೋಜನೆ, ವಿಮಾನ ಹಾರಾಟದಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ.

ಇದಲ್ಲದೆ, ಕೀಟನಾಶಕ ಸಿಂಪಡಣೆಯ ನಿರ್ವಾಹಕರು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಕೀಟನಾಶಕವನ್ನು ವೈಮಾನಿಕವಾಗಿ ಸಿಂಪಡಣೆಗೆ ಮುನ್ನ ಅಧಿಕಾರಿಗಳ ಮೂಲಕ 24 ಗಂಟೆಗಳ ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಇದಲ್ಲದೆ, ಪೈಲಟ್‌ಗಳು ಕೀಟನಾಶಕಗಳ ಕ್ಲಿನಿಕಲ್ ಪರಿಣಾಮಗಳನ್ನು ಒಳಗೊಂಡಂತೆ ವಿಶೇಷ ತರಬೇತಿಗೆ ಒಳಗಾಗಬೇಕು ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ ತಂತ್ರಜ್ಞಾನವು ಕೆಲವು ಕೃಷಿಯಲ್ಲಿ ಬಹಳಷ್ಟು ಉಪಯೋಗವಾಗಿದೆ. ಹೀಗಾಗಿ ಕೃಷಿಕರು ಈ ತಂತ್ರಜ್ಞಾನದ ಬಳಕೆಗೆ ಆಸಕ್ತರಾಗಿದ್ದಾರೆ. ಹೀಗಾಗಿ ಸರ್ಕಾರವು ಕೆಲವು ನಿಬಂಧನೆಗಳೊಂದಿಗೆ ಬಳಕೆಗೆ ಸದ್ಯ ಅನುಮೋದನೆ ನೀಡಿದೆ.

Source:BS Digital media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

3 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

5 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

15 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

15 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

23 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago