ರೈತರ ಮತ್ತು ಬಡವರ ಹಿತ ಕಾಯಲು ಸರ್ಕಾರ ಬದ್ಧ| ಕೇಂದ್ರ ಸಚಿವ  ಪ್ರಲ್ಹಾದ್ ಜೋಶಿ

November 11, 2024
8:36 PM

ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. 

Advertisement
Advertisement
Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪರಿಹಾರವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಉತ್ಪನ್ನಗಳ ಎರಡನೇ ಹಂತದ ಮಾರಾಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.  ಭಾರತ್ ಬ್ರ್ಯಾಂಡ್‌ನ ಅಕ್ಕಿ, ಗೋದಿ ಹಿಟ್ಟು, ಬೇಳೆಗಳು ಮುಂತಾದ ಅಗತ್ಯ ವಸ್ತುಗಳು ಅತೀ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ.

Advertisement

ಹುಬ್ಬಳ್ಳಿಯ ಮೂರು ಸಾವಿರ ಮಠದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ವಾಹನಗಳಿಗೆ ಚಾಲನೆ ನೀಡಲಾಗಿದ್ದು, ನೆರೆದಿದ್ದ ಮಹಿಳೆಯರಿಗೆ ಉತ್ಪನ್ನಗಳನ್ನು ಅಗ್ಗದ ಬೆಲೆಯಲ್ಲಿ ವಿತರಿಸಲಾಯಿತು. ಭಾರತ್ ಉತ್ಪನ್ನ ಖರೀದಿಸಿದ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ್ ಅಕ್ಕಿ 34 ರೂಪಾಯಿ, ಗೋಧಿ ಹಿಟ್ಟು 30, ಕಡಲೆ ಬೇಳೆ 70, ಹೆಸರು ಬೇಳೆ 107 ರೂಪಾಯಿಗೆ ರಿಯಾಯಿತಿ ದರದಲ್ಲಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲಬೆಲೆ ನೀಡಿ ರೈತರ ಹಿತರಕ್ಷಣೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರಧಾನ್ಯವನ್ನು ಪೂರೈಸಿ ಜನಸಾಮಾನ್ಯರಿಗೆ ವಿತರಿಸುವ ಮೂಲಕ ಅವರ ಹಿತರಕ್ಷಣೆಗೆ ಮುಂದಾಗಿದೆ ಎಂದು ತಿಳಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror