ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪರಿಹಾರವಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಉತ್ಪನ್ನಗಳ ಎರಡನೇ ಹಂತದ ಮಾರಾಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾರತ್ ಬ್ರ್ಯಾಂಡ್‌ನ ಅಕ್ಕಿ, ಗೋದಿ ಹಿಟ್ಟು, ಬೇಳೆಗಳು ಮುಂತಾದ ಅಗತ್ಯ ವಸ್ತುಗಳು ಅತೀ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ.
ಹುಬ್ಬಳ್ಳಿಯ ಮೂರು ಸಾವಿರ ಮಠದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ವಾಹನಗಳಿಗೆ ಚಾಲನೆ ನೀಡಲಾಗಿದ್ದು, ನೆರೆದಿದ್ದ ಮಹಿಳೆಯರಿಗೆ ಉತ್ಪನ್ನಗಳನ್ನು ಅಗ್ಗದ ಬೆಲೆಯಲ್ಲಿ ವಿತರಿಸಲಾಯಿತು. ಭಾರತ್ ಉತ್ಪನ್ನ ಖರೀದಿಸಿದ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ್ ಅಕ್ಕಿ 34 ರೂಪಾಯಿ, ಗೋಧಿ ಹಿಟ್ಟು 30, ಕಡಲೆ ಬೇಳೆ 70, ಹೆಸರು ಬೇಳೆ 107 ರೂಪಾಯಿಗೆ ರಿಯಾಯಿತಿ ದರದಲ್ಲಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲಬೆಲೆ ನೀಡಿ ರೈತರ ಹಿತರಕ್ಷಣೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರಧಾನ್ಯವನ್ನು ಪೂರೈಸಿ ಜನಸಾಮಾನ್ಯರಿಗೆ ವಿತರಿಸುವ ಮೂಲಕ ಅವರ ಹಿತರಕ್ಷಣೆಗೆ ಮುಂದಾಗಿದೆ ಎಂದು ತಿಳಿಸಿದರು.
ಇಡೀ ಸಮುದಾಯ ಮತ್ತು ದೇಶದ ದೃಷ್ಠಿಯಿಂದ ನೋಡಿದರೆ ಅಕ್ಕಿಯನ್ನು ಬೆಳೆಸುವ ಕೃಷಿಕರನ್ನು ಪ್ರೋತ್ಸಾಹಿಸುವ…
ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ…
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ತಹ ಪರಿಸ್ಥಿತಿಯಲ್ಲಿ ರೈತರು…
ಜಲ ಜಾಗೃತಿ, ಜನ ಜಾಗೃತಿಗಾಗಿ ಶೃಂಗೇರಿಯಿಂದ ಕಿಷ್ಕಿಂದೆವರೆಗೆ 400 ಕಿಲೋ ಮೀಟರ್ ವರೆಗೆ…
ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ…
ಹಿಂಗಾರು ಮಳೆಯು ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 16 ರ ತನಕ ಹಾಗೂ…