ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
ಉತ್ತಮ ಗುಣಮಟ್ಟದ ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ. ಸದ್ಯ 20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್ ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.
Source:business Standard