Advertisement
MIRROR FOCUS

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

Share

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ  ರಫ್ತಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಕ್ರಿಯಾ ಯೋಜನೆಗಳನ್ನು ರೂಪಿಸುತ್ತಿದೆ. ಈ ಪ್ರತಿಯೊಂದು ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಸೂಕ್ತ ಕ್ರಮವು ಮುಂದಿನ 3-4 ತಿಂಗಳುಗಳಲ್ಲಿ ಸಿದ್ಧವಾಗಲಿದೆ ಎಂದು ವಾಣಿಜ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಉತ್ತಮ ಗುಣಮಟ್ಟದ  ವಸ್ತುಗಳ ಉತ್ಪಾದನೆ ಇಲ್ಲಿ ಇರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಅವುಗಳಿಗೆ ಬೇಡಿಕೆ ಇರುವುದರಿಂದ ರಫ್ತುಗಳನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗಿದೆ.  ಸದ್ಯ  20 ಉತ್ಪನ್ನಗಳನ್ನು ಗುರುತಿಸಲಾಗಿದೆ. ಪ್ರಸ್ತುತ, ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಕಡಿಮೆಯಾಗಿದೆ. ಈ ಎಲ್ಲಾ ಉತ್ಪನ್ನಗಳಿಗೆ ಸೂಕ್ತವಾದ ಸ್ಥಾನಮಾನಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಗರ್ವಾಲ್  ಹೇಳಿದ್ದಾರೆ.ಜಾಗತಿಕ ರಫ್ತಿನಲ್ಲಿ ಭಾರತದ ಪಾಲು ಶೇ.2.5ರಷ್ಟಿದ್ದು, ಮುಂಬರುವ ವರ್ಷಗಳಲ್ಲಿ ಇದನ್ನು ಶೇ.4-5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. 20 ಉತ್ಪನ್ನಗಳಲ್ಲಿ ತಾಜಾ ದ್ರಾಕ್ಷಿ, ಪೇರಳೆ, ದಾಳಿಂಬೆ, ಕಲ್ಲಂಗಡಿ, ಈರುಳ್ಳಿ, ಹಸಿಮೆಣಸಿನಕಾಯಿ, ಕ್ಯಾಪ್ಸಿಕಂ, ಬೆಂಡೆಕಾಯಿ, ಬೆಳ್ಳುಳ್ಳಿ, ನೆಲಗಡಲೆ, ಗೋಡಂಬಿ, ಬೆಲ್ಲ, ನೈಸರ್ಗಿಕ ಜೇನುತುಪ್ಪ ಮತ್ತು ತುಪ್ಪ , ಬಾಸ್ಮತಿ ಅಕ್ಕಿ ಸೇರಿದಂತೆ 20 ಕೃಷಿ ಉತ್ಪನ್ನಗಳ ರಫ್ತುಗಳನ್ನು ಹೆಚ್ಚಿಸಲು ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ.

Source:business Standard

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

39 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago