ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ 15 ರಿಂದ ಅನ್ವಯ ವಾಗುವಂತೆ ಇಲಾಖೆಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಆದೇಶ ಜಾರಿ ಮಾಡಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…