ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿಯಿರುವ 5267 ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಇಲಾಖೆಯ ವತಿಯಿಂದ ನೂತನವಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದ್ದು, ಇನ್ನೊಂದು ವಾರದಲ್ಲಿ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜನರ ಬದುಕು ಹಸನು ಗೊಳಿಸಲು ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…