ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ………ಮುಂದೆ ಓದಿ……..
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷವು ಹಲವು ವರ್ಷಗಳಿಂದ ಇದೆ. ಇದರಿಂದ ಸ್ಥಳೀಯರು ತುಂಬಾ ತೊಂದರೆಯಾಗಿದೆ. ಶಾಶ್ವತವಾಗಿ ವನ್ಯಪ್ರಾಣಿ ಹಾವಳಿ ನಿಯಂತ್ರಿಸಲು ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್, ಸೋಲಾರ್ ಬೇಲಿ ನಿರ್ಮಾಣ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಮುಂದಾಗಲಾಗಿದೆ ಎಂದು ತಿಳಿಸಿದ್ದಾರೆ.
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…