ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು | ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

July 19, 2024
3:25 PM
ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸದನದಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

Advertisement

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.

Advertisement

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror