ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆರೋಗ ಹಾಗೂ ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲಾ ಕಾರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಭೆಗೆ ತಿಳಿಸಿದರು.
ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲುತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕೃಷಿಕರ ನೆರವಿಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.
ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.
ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …