ನಕಲಿ ರಸಗೊಬ್ಬರ, ಕೀಟನಾಶಕ ವಿರುದ್ಧ ಮಸೂದೆ ಅಗತ್ಯ

December 22, 2025
7:59 AM

ಮುಂದಿನ ಸಂಸತ್ ಅಧಿವೇಶನದಲ್ಲಿ ಸರ್ಕಾರ ನಕಲಿ ರಸಗೊಬ್ಬರಗಳು ಹಾಗೂ ಕೀಟನಾಶಕಗಳ ವಿರುದ್ಧ ಮಸೂದೆಯನ್ನು ಮಂಡಿಸಲಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ದೆಹಲಿಯಲ್ಲಿ ಕಿಸಾನ್ ಟ್ರಸ್ಟ್ ಆಯೋಜಿಸಿದ್ದ ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಹಕರು ಮತ್ತು ಕೃಷಿಕರನ್ನು ದಾರಿತಪ್ಪಿಸುವ ಟ್ಯಾಗ್ ಗಳ ಅಡಿಯಲ್ಲಿ ನಕಲಿ ರಸಗೊಬ್ಬಕ ಕೀಟನಾಶಕ ಮತ್ತು ಅನಧಿಕೃತ ಜೈವಿಕ ಉತ್ತೇಜಕಗಳ ಮಾರಾಟ ಕಳವಳಕಾರಿಯಾಗಿದೆ. ಇವುಗಳ ನಿಗ್ರಹಕ್ಕೆ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು, ಅಪ್ರಾಮಾಣಿಕ ವ್ಯಾಪಾರಿಗಳ ವಿರುದ್ಧ ಸರ್ಕಾರ ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ಅಂಗೀಕರಿಸಲ್ಪಟ್ಟ ವಿಕಸಿತ ಭಾರತ ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ಖಾತ್ರಿಪಡಿಸಲಾದ ಉದ್ಯೋಗ ದಿನಗಳನ್ನು ನೂರರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ವಿಜ್ಞಾನಿಗಳು ಮತ್ತು ರೈತರ ನಡುವಿನ ನೇರ ಸಂವಾದದ ಮಹತ್ವವನ್ನು ಹೇಳಿದ ಅವರು, ಸಂಶೋಧನಾ ಸಂಶೋಧನೆಗಳನ್ನು ನೇರವಾಗಿ ಕ್ಷೇತ್ರಗಳಿಗೆ ತರುವ ‘ಪ್ರಯೋಗಾಲಯದಿಂದ ಭೂಮಿಗೆ’ ಎಂಬ ದೃಷ್ಟಿಕೋನ ಅಗತ್ಯ ಇದೆ ಎಂದರು. ರೈತರೊಂದಿಗೆ ನೇರ ಸಂವಹನ ಮತ್ತು ಜ್ಞಾನ ವಿನಿಮಯಕ್ಕಾಗಿ ವಿಜ್ಞಾನಿಗಳು ವರ್ಷಕ್ಕೊಮ್ಮೆ ಕೃಷಿ ಜಮೀನುಗಳಿಗೆ ಭೇಟಿ ನೀಡಬೇಕೆಂದು ಸರ್ಕಾರ ನಿರ್ಧರಿಸಿದೆ ಎಂದರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror