Advertisement
ಸುದ್ದಿಗಳು

#TomatoPrice| ಟೊಮೆಟೋ ಬೆಲೆ ಏರಿಕೆಗೆ ಸರ್ಕಾರದಿಂದ ಬ್ರೇಕ್ | ಸಬ್ಸಿಡಿ ಹೆಚ್ಚಿಸಿ ಕಿಲೋಗೆ 70 ರೂನಂತೆ ಮಾರಾಟ |

Share

ಕೇಂದ್ರ ಸರ್ಕಾರ ಟೊಮೆಟೋ ಬೆಲೆ ಏರಿರುವುದನ್ನು ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಗಗನಕ್ಕೇರಿದ್ದ ಟೊಮೆಟೋ ಬೆಲೆಯ ಬಿಸಿ ಜನಸಾಮಾನ್ಯರಿಗೆ ಹೆಚ್ಚು ತಾಕದಿರಲೆಂದು ಸರ್ಕಾರ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರುತ್ತಿದೆ. 70 ರೂಗೆ ಟೊಮೆಟೋ ಮಾರಲಾಗುತ್ತಿದೆ.

ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ  ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಸಂಸ್ಥೆಗಳ ರೀಟೇಲ್ ಔಟ್​ಲೆಟ್​ಗಳ ಮೂಲಕ ಮತ್ತು ಮೊಬೈಲ್ ವ್ಯಾನ್​ಗಳ ಮೂಲಕ ಟೊಮೆಟೋವನ್ನು ಸಬ್ಸಿಡಿ ದರದಲ್ಲಿ ಮಾರಲಾಗುತ್ತಿದೆ. ಬೆಲೆ ಏರಿಕೆ ಹೆಚ್ಚು ಇರುವ ಕಡೆ ಸಬ್ಸಿಡಿ ಟೊಮೆಟೋ ಮಾರಾಟ ಹೆಚ್ಚು ಮಾಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಈ ಸೀಸನ್​ನಲ್ಲಿ ಟೊಮೆಟೋ ಹೆಚ್ಚು ಬೆಳೆಯಲಾಗುತ್ತಿದೆ. ಸರ್ಕಾರದ  ಎನ್​ಸಿಸಿಎಫ್ ಮತ್ತು ಎನ್​ಎಎಫ್​ಇಡಿ ಸಂಸ್ಥೆಗಳು ಈ ರಾಜ್ಯಗಳ ವಿವಿಧ ಮಂಡಿಗಳಿಂದ ಟೊಮೆಟೋ ಖರೀದಿಸಿ ತಮ್ಮ ರೀಟೇಲ್ ಔಟ್​ಲೆಟ್​ಗಳಲ್ಲಿ ಸಬ್ಸಿಡಿ ದರದಲ್ಲಿ ಮಾರುತ್ತಿವೆ. ಅಕ್ಟೋಬರ್​ವರೆಗೂ ದೇಶಾದ್ಯಂತ ಟೊಮೆಟೋ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಅದಾದ ಬಳಿಕ ಟೊಮೆಟೋ ಸರಬರಾಜು ಹೆಚ್ಚುವುದರಿಂದ ಬೆಲೆ ಸಹಜವಾಗಿ ಇಳಿಕೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago