ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ 85 ವಿಭಾಗ ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ. ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರಣ್ಯ ಪ್ರದೇಶದೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆಯ ಖಾತ್ರಿ ಪಡಿಸಲು ಕ್ರಮ ವಹಿಸುವಂತೆ ಹೇಳಿದ್ದಾರೆ. ಬೇಸಿಗೆಯಲ್ಲಿ ಕಾವೇರಿ ವನ್ಯಜೀವಿ ಧಾಮ ಸೇರಿದಂತೆ ಜಿಲ್ಲೆಯ ಎಲ್ಲ ಅರಣ್ಯಗಳಲ್ಲಿರುವ ನೀರು ಗುಂಡಿಗಳಲ್ಲಿ ನೀರು ಇರುವಂತೆ ಕ್ರಮ ವಹಿಸಬೇಕು. ಅಗತ್ಯ ಇರುವ ಕಡೆ ಕೊಳವೆಬಾವಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿ ನಿರಂತರವಾಗಿ ನೀರು ಹಾಯಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಬೇಸಿಗೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…